
ಬೆಳಗಾವಿ: ಶಿಕ್ಷಕರ, ಶಾಲಾ-ಕಾಲೇಜುಗಳ ಮತ್ತು ವಿಶ್ವವಿದ್ಯಾಲಯಗಳ ವಿವಿಧ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಆಗ್ರಹಿಸಿದ್ದಾರೆ.
ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾದ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕೆಂಬ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಈಡೇರಿಸುವತ್ತ ಕ್ರಮ ಕೈಗೊಳ್ಳಬೇಕು. ಖಾಸಗಿ ಅನುದಾನಿತ ವ್ಯವಸ್ಥೆಯಲ್ಲಿರುವ ಶಿಕ್ಷಕರಿಗೆ ಹಳೆಯ ಮತ್ತು ಹೊಸ ಎರಡು ಪಿಂಚಣಿ ವ್ಯವಸ್ಥೆ ಇರದೇ ಇರುವಂತಹದು, ಸರ್ಕಾರದ ಗಮನಕ್ಕಿದ್ದು, ಅವರಿಗೂ ನಿಶ್ಚಿತ ಪಿಂಚಣಿ ವ್ಯವಸ್ಥೆ ಒದಗಿಸುವ ಕುರಿತು ಸರ್ಕಾರ ಕ್ರಮವಹಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.ಕಾಲ್ಪನಿಕ ವೇತನ ಬಡ್ತಿ ಕುರಿತು ಹಲವು ವರ್ಷಗಳಿಂದ ಚರ್ಚೆಗಳು ನಡೆಯುತ್ತಿದ್ದು, ಬೆಳಗಾವಿಯ ಈ ಅಧಿವೇಶನದಲ್ಲಾದರೂ ಚಚರ್ೆಯ...