
ಬಡ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣ ಎನ್‍ಇಪಿಯಿಂದ ಸಾಧ್ಯಬೆಳಗಾವಿ: ಗ್ರಾಮೀಣ ಭಾಗದ ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ವಿಶ್ವಮಾನ್ಯ ಮತ್ತು ಗುಣಮಟ್ಟದ ಶಿಕ್ಷಣ ನೀಡುವ ಸಂಕಲ್ಪ ರಾಷ್ಟ್ರೀಯ ಶಿಕ್ಷಣ ನೀತಿ ಹೊಂದಿದೆ. ಎನ್‍ಇಪಿಯಿಂದ ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುವುದು ಎಂದು ಮಾತ್ರ ಸಾಧ್ಯ ಎಂದು ಮಾಜಿ ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ನಗರದ ಲಿಂಗರಾಜ ಮಹಾವಿದ್ಯಾಲಯದ ಸಭಾಭವನದಲ್ಲಿ ಪೀಪಲ್ಸ್ ಫೋರಂ ಫಾರ್ ಕರ್ನಾಟಕ ಎಜುಕೇಷನ್ ನೇತೃತ್ವದಲ್ಲಿ ಮಂಗಳವಾರ ಜರುಗಿದ ಎನ್‍ಇಪಿ 2020 ಮತ್ತು ಶಿಕ್ಷಣ ತಜ್ಞರ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು. ಖಾಸಗಿ ಶಿಕ್ಷಣ ಸಂಸ್ಥೆಗಳು ಸಹಜವಾಗಿ ಕೇಂದ್ರದ ಸಿಬಿಎಸ್‍ಸಿ ಪಠ್ಯಕ್ರಮ ಅಳವಡಿಸಿಕೊಂಡು ಎನ್‍ಇಪಿ ಶಿಕ್ಷಣ ಒದಗಿಸುತ್ತದೆ. ಆದರೆ ಸಂಕುಚಿತ ರಾಜಕೀಯ ಮನಸ್ಥಿತಿ...