ಬೆಳಗಾವಿ : ಜಾಗತೀಕರಣವು ವಾಣಿಜ್ಯ ಅಧ್ಯಯನ ಕ್ಷೇತ್ರದಲ್ಲಿ ಹೊಸ ಸವಾಲುಗಳನ್ನು ಸೃಷ್ಟಿಸುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಭೌತಿಕ ಬುದ್ಧಿಮತ್ತೆ ಮತ್ತು ಇತರ ಹೊಸ ಅಧ್ಯಯನ ಕ್ಷೇತ್ರಗಳು ತೆರೆದುಕೊಳ್ಳುತ್ತಿದ್ದು, ಇದರಿಂದ ವಾಣಿಜ್ಯ ಅಧ್ಯಯನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಮುಂಬರುವ ಪೀಳಿಗೆ ಈ ಸವಾಲುಗಳನ್ನು ಎದುರಿಸಲು ಸಿದ್ಧರಾಗಬೇಕು ಮತ್ತು ಅವುಗಳನ್ನು ಅವಕಾಶಗಳಾಗಿ ಪರಿವರ್ತಿಸಿಕೊಳ್ಳಬೇಕು ಎಂದು ರಾಣಿ ಚನ್ನಮ್ಮ ವಿಶ್ವಿದ್ಯಾಲಯದ ಬಿ ಎಸ್ ನಾವಿ ಅವರು ಕಳವಳ ವ್ಯಕತಪಡಿಸಿದ್ದಾರೆ.
ಬೆಳಗಾವಿಯ ಮಹಾಂತ ಭವನದಲ್ಲಿ ಗುರುವಾರ ರಾಣಿ ಚನ್ನಮ್ಮ ವಿಶ್ವವಿದ್ಯಾನಿಲಯದ ಮಹಾವಿದ್ಯಾಲಯ ಅಧ್ಯಾಪಕರ ಸಂಘವು ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ, ಜಾಗತೀಕರಣದ ಪ್ರಭಾವ ಮತ್ತು ವಾಣಿಜ್ಯ ಅಧ್ಯಯನ ಕ್ಷೇತ್ರದ ಮೇಲಿನ ಪರಿಣಾಮಗಳ ಕುರಿತು ಪ್ರೊ. ಬಿ. ಎಸ್. ನಾವಿ ಮತ್ತು ಎಸ್. ಬಿ. ಆಕಾಶ ಅವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಸ್. ಬಿ. ಆಕಾಶ ಅವರು, ಜಾಗತೀಕರಣವು ವಾಣಿಜ್ಯ ಅಧ್ಯಯನ ಕ್ಷೇತ್ರದಲ್ಲಿ ಆಕರ್ಷಕ ಅವಕಾಶಗಳನ್ನು ಒದಗಿಸುತ್ತಿದೆ ಎಂದು ಅಭಿಪ್ರಾಯಪಟ್ಟರು. ಈ ಅವಕಾಶಗಳನ್ನು ಬಳಸಿಕೊಂಡು ಉತ್ತಮ ಶಿಕ್ಷಣವನ್ನು ನೀಡಲು ಅಧ್ಯಾಪಕರು ಶ್ರಮಿಸಬೇಕು ಎಂದು ಅವರು ಸಲಹೆ ನೀಡಿದರು.
ನಿವೃತ್ತ ಅಧ್ಯಾಪಕರಿಗೆ ಸನ್ಮಾನ ಮತ್ತು ಇತರ ಗೌರವಗಳು:
ಕಾರ್ಯಕ್ರಮದಲ್ಲಿ, ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಅಧ್ಯಾಪಕರಿಗೆ ಸನ್ಮಾನಿಸಲಾಯಿತು. ಪಿಎಚ್‌ಡಿ ಪದವಿ ಪಡೆದ ಮತ್ತು ಕೆ-ಸೆಟ್/ನೆಟ್ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಧ್ಯಾಪಕರಿಗೂ ಗೌರವ ಸಲ್ಲಿಸಲಾಯಿತು.
0 comments:
ಕಾಮೆಂಟ್ ಪೋಸ್ಟ್ ಮಾಡಿ